ಇದೀಗ ಬಂದ ಸುದ್ದಿ: ವಿಧಾನಸಭೆಯ ಉಪಸಭಾಪತಿಯಾಗಿ ಆಯ್ಕೆಯಾದ ಬಿಜೆಪಿಯ ಈ ಪ್ರಭಾವಿ ಶಾಸಕ.?

ಮೈತ್ರಿ ಸರ್ಕಾರದ ವೇಳೆಯಲ್ಲಿ ನೇಮಕಗೊಂಡಿದ್ದಂತ ವಿಧಾನ ಸಭೆಯ ಉಪಾಧ್ಯಕ್ಷರಾದ ಶಾಸಕ ಕೃಷ್ಣಾರೆಡ್ಡಿಯವರು ಇತ್ತೀಚೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹೀಗಾಗಿ ವಿಧಾನಸಭೆಯ ಉಪಾಧ್ಯಕ್ಷರ ಸ್ಥಾನ ಖಾಲಿಯಾಗಿತ್ತು. ಈ ಸ್ಥಾನಕ್ಕೆ ತೀರ್ಥಹಳ್ಳಿಯ ಬಿಜೆಪಿ ಶಾಸಕ ಅರಗ ಜ್ಞಾನೇಂದ್ರ ಅವರನ್ನು ಆಯ್ಕೆ ಮಾಡಲಾಗಿದೆ.

ಮೈತ್ರಿ ಸರ್ಕಾರ ಪಥನವಾಗಿ, ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಅಸ್ಥಿತ್ವಕ್ಕೆ ಬಂದ ನಂತ್ರ, ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ರಮೇಶ್ ಕುಮಾರ್ ರಾಜೀನಾಮೆ ನೀಡಿ ಹೊರನಡೆದಿದ್ದರು. ಈ ಸ್ಥಾನಕ್ಕೆ ವಿಶ್ವೇಶ್ವರ ಹೆಗಡೆ ಕಾಗೇರಿಯವರನ್ನು ನೇಮಕ ಮಾಡಲಾಗಿತ್ತು. ಆದ್ರೇ ಉಪಾಧ್ಯಕ್ಷರ ಸ್ಥಾನದಿಂದ ಕೃಷ್ಣಾ ರೆಡ್ಡಿಯವರು ಹೊರ ನಡೆದಿರಲಿಲ್ಲ.

ಇಂತಹ ಉಪಾಧ್ಯಕ್ಷರನ್ನು ಅವಿಶ್ವಾಸ ನಿರ್ಣಯದ ಮೂಲಕ ಕೆಳಗಿಳಿಸುವಂತ ತೀರ್ಮಾನಕ್ಕೆ ರಾಜ್ಯ ಬಿಜೆಪಿ ನೇತೃತ್ವದ ಸರ್ಕಾರ ಮುಂದಾಗಿತ್ತು. ಹೀಗಾಗಿ ಕಳೆದ ಎರಡು ದಿನಗಳ ಹಿಂದೆ ರಾಜ್ಯ ವಿಧಾನಸಭೆಯ ಉಪಾಧ್ಯಕ್ಷರ ಸ್ಥಾನಕ್ಕೆ ಜೆಡಿಎಸ್ ನ ಕೃಷ್ಣಾ ರೆಡ್ಡಿಯವರು ರಾಜೀನಾಮೆ ನೀಡಿದ್ದರು. ಹೀಗಾಗಿ ಕೃಷ್ಣಾ ರೆಡ್ಡಿಯವರಿಂದ ತೆರವಾದಂತ ಸ್ಥಾನಕ್ಕೆ ಇದೀಗ ತೀರ್ಥಹಳ್ಳಿಯ ಶಾಸಕ ಅರಗ ಜ್ಞಾನೇಂದ್ರ ಅವರನ್ನು ವಿಧಾನಸಭೆಯ ಉಪಾಧ್ಯಕ್ಷರ ಸ್ಥಾನಕ್ಕೆ ನೇಮಕ ಮಾಡಲಾಗಿದೆ.

Comments