ದೇಶದಲ್ಲಿ ಕರೊನಾ ಸೋಂಕು ತಡೆಗಟ್ಟಲು ಪ್ರಧಾನಮಂತ್ರಿಯವರು ಘೋಷಿಸಿರುವ ಲಾಕ್ಡೌನ್ ಶುರುವಾಗಿ 36 ಗಂಟೆಗಳಾಗಿವೆ. ಬಡವರು, ವಲಸಿಗರು, ಮಹಿಳೆಯರು ಮತ್ತು ಇತರೆ ಶ್ರಮಿಕ ವರ್ಗದವರನ್ನು ಗಮನದಲ್ಲಿರಿಸಿಕೊಂಡು ಅದೇ ರೀತಿ ಈ ಸೋಂಕು ನಿವಾರಣೆಗಾಗಿ ಹೋರಾಡುತ್ತಿರುವ ಕರೊನಾ ವಾರಿಯರ್ಸ್ ಅವರನ್ನೂ ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ 1.70 ಲಕ್ಷ ಕೋಟಿ ರೂಪಾಯಿಗಳ ಪ್ಯಾಕೇಜನ್ನು ಘೋಷಿಸಿದೆ.
ಈ ಸಂಬಂಧ ಪತ್ರಿಕಾಗೋಷ್ಠಿ ನಡೆಸುತ್ತಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕರೋನಾ ವಿರುದ್ಧದ ಸಮರದಲ್ಲಿ ಮುಂಚೂಣಿಯಲ್ಲಿದ್ದು ಕೆಲಸ ಮಾಡುತ್ತಿರುವ ಡಾಕ್ಟರ್ಸ್, ಆಶಾ ಕಾರ್ಯಕರ್ತೆಯರು, ನರ್ಸ್ಗಳು ಎಲ್ಲರಿಗೂ ಪ್ರತಿಯೊಬ್ಬರಿಗೂ ತಲಾ 50 ಲಕ್ಷರೂಪಾಯಿ ಮೌಲ್ಯದ ಮೆಡಿಕಲ್ ಇನ್ಶೂರೆನ್ಸ್ ಒದಗಿಸುತ್ತಿದ್ದೇವೆ ಎಂದು ಹೇಳಿದರು.
ಬಡವರಿಗೆ ಗರೀಬ್ ಕಲ್ಯಾಣ್ ಅನ್ನ ಯೋಜನೆ ಘೋಷಿಸಿದ ಅವರು, 80 ಕೋಟಿ ಬಡವರು ಇದರ ಫಲಾನುಭವಿಗಳು. ಇದರಂತೆ, ಮುಂದಿನ ಮೂರು ತಿಂಗಳು ಕಾಲ ಪ್ರತಿಯೊಬ್ಬರಿಗೂ 5 ಕಿಲೋ ಅಕ್ಕಿ ಅಥವಾ 5 ಕಿಲೋ ಗೋಧಿ, ಜತೆಗೆ ಒಂದು ಕಿಲೋ ದಾಲ್ ಕೂಡ ಸಿಗಲಿದೆ ಎಂದು ಹೇಳಿದರು.
Comments
Post a Comment