ಮಾರಣಾಂತಿಕ ಕೊರೊನಾ ಸೋಂಕು ತಡೆಗಟ್ಟಲು ದೇಶಾದ್ಯಂತ ಲಾಕ್ ಡೌನ್ ಘೋಷಿಸಲಾಗಿದೆ. ಆದರೆ, ಕರ್ನಾಟಕ ಸೇರಿದಂತೆ ಕೆಲ ರಾಜ್ಯಗಳಲ್ಲಿ ಈ ಲಾಕ್ ಡೌನ್ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಲಾಕ್ ಡೌನ್ ನ್ನು ಗಂಭೀರವಾಗಿ ಪರಿಗಣಿಸಲು ನಿರ್ಧರಿಸಿದ್ದು, ಸ್ವತಃ ಗೃಹ ಸಚಿವ ಅಮಿತ್ ಶಾ ಅವರೇ ರಾಜ್ಯಗಳಲ್ಲಿನ ಲಾಕ್ ಡೌನ್ ಪಾಲನೆಯನ್ನು ಖುದ್ದಾಗಿ ಅವಲೋಕಿಸಿದ್ದಾರೆ. ಅಲ್ಲದೇ, ನಾಳೆಯಿಂದಲೇ ರಾಜ್ಯದಲ್ಲಿ ಪ್ಯಾರಮಿಲಿಟರಿ ನಿಯೋಜಿಸುವ ಸಾಧ್ಯತೆ ಇದೆ.
ಕರ್ನಾಟಕ ಸೇರಿದಂತೆ ಕೆಲ ರಾಜ್ಯಗಳಲ್ಲಿ ಲಾಕ್ ಡೌನ್ ಆದೇಶವನ್ನು ಸರಿಯಾಗಿ ಪಾಲಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಗೃಹ ಸಚಿವ ಅಮಿತ್ ಶಾ ಈಗಾಗಲೇ ಕೇಂದ್ರದ ಸಚಿವರು ಹಾಗೂ ಸಂಸದರ ಜೊತೆ ಸಭೆ ನಡೆಸಿ ಲಾಕ್ ಡೌನ್ ಕುರಿತಾಗಿ ಮಾಹಿತಿ ಸಂಗ್ರಹಿಸಿದ್ದಾರೆ. ಅಲ್ಲದೇ, ಅಮಿತ್ ಶಾ ಅವರು ಗೃಹ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದುಕೊಂಡರು. ನೇರವಾಗಿ ಅಮಿತ್ ಶಾ ರಿಂದಲೇ ಪರಿಸ್ಥಿತಿ ಅವಲೋಕಿಸಲಾಗಿದ್ದು, ನಾಳೆಯಿಂದಲೇ ರಾಜ್ಯದಲ್ಲಿ ಪ್ಯಾರಮಿಲಿಟರಿ ನಿಯೋಜಿಸುವ ಕುರಿತು ಚರ್ಚೆ ನಡೆಸಲಾಗಿದೆ. ಇನ್ನು ರಾಜ್ಯಗಳಿಗೆ ಪ್ಯಾರಾ ಮಿಲಿಟರಿ ರವಾನಿಸುವ ಕುರಿತಂತೆ ಇಂದು ರಾತ್ರಿಯೊಳಗೆ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ….
Comments
Post a Comment