ರಾಜರಾಜೇಶ್ವರಿನಗರ ಕ್ಷೇತ್ರದ ಚುನಾವಣೆಯಲ್ಲಿ ಮುನಿರತ್ನ ಅಕ್ರಮದಿಂದ ಗೆಲುವು ಸಾಧಿಸಿದ್ದಾರೆ. ಹೀಗಾಗಿ ತನ್ನನ್ನು ಶಾಸಕ ಎಂದು ಘೋಷಿಸುವಂತೆ ತುಳಸಿ ಮುನಿರಾಜು ಗೌಡ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ. ಇಷ್ಟೇ ಅಲ್ಲ ಇತ್ತ ಮುನಿರತ್ನ ಸಲ್ಲಿಸಿದ್ದ 2 ಅರ್ಜಿಗಳನ್ನು ವಜಾಗೊಳಿಸಿದ್ದು, ವಿಚಾರಣೆಯನ್ನು ಏಪ್ರಿಲ್ 15ಕ್ಕೆ ಮುಂದೂಡಿದೆ....
2018ರ ವಿಧಾನಸಭೆ ಚುನಾವಣೆಯಲ್ಲಿ ಮುನಿರತ್ನ ಆಯ್ಕೆ ಅಸಿಂಧು ಕೋರಿ ಬಿಜೆಪಿ ಪರಾಜಿತ ಅಭ್ಯರ್ಥಿ ತುಳಸಿ ಮುನಿರಾಜು ಗೌಡ ಅರ್ಜಿಯನ್ನು ಹೈಕೋರ್ಟ್ಗೆ ಸಲ್ಲಿಸಿದ್ದರು. ಬಳಿಕ ತನ್ನನ್ನು ಶಾಸಕ ಎಂದು ಘೋಷಿಸಬೇಕು ಎಂದು ಮಧ್ಯಂತರ ಅರ್ಜಿ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಜಾ ಮಾಡಿದ ಹೈಕೋರ್ಟ್, ಚುನಾವಣಾ ಅಕ್ರಮ ಎಸಗಿದ್ದಾರೆ ಎಂಬುದಕ್ಕೆ ಸಾಕ್ಷ್ಯ ಒದಗಿಸಲು ಕೋರಿದ ಅಂಶವನ್ನು ತಿದ್ದುಪಡಿ ಅರ್ಜಿಯಲ್ಲಿ ಸೇರಿಸಲು ನ್ಯಾಯಪೀಠ ಅವಕಾಶ ಕಲ್ಪಿಸಿದೆ....
Comments
Post a Comment