ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಸಿಹಿಸುದ್ದಿ ನೀಡಿದ್ದು, ರೈತರಿಗೆ ಹೊಸ ಸಾಲ ನೀಡಲು ಸೂಚನೆ ನೀಡಲಾಗಿದೆ ಎಂದು ಸಹಕಾರ ಖಾತೆ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವರ್ಷ ಸಹಕಾರ ಸಂಘಗಳಿಂದ ರೈತರಿಗೆ ಸಾಲ ನೀಡುವಂತೆ ಈಗಾಗಲೇ ಸೂಚನೆ ನೀಡಲಾಗಿದೆ. ಡಿಸಿಸಿ ಬ್ಯಾಂಕ್ ಹಾಗೂ ಅಪೆಕ್ಸ್ ಬ್ಯಾಂಕುಗಳಿಗೆ ಸುತ್ತೋಲೆ ಹೊರಡಿಸಿ ಹೊಸದಾಗಿ ಸಾಲ ನೀಡಲು ತಿಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಇನ್ನು ಕಳೆದ ವರ್ಷ ರಾಜ್ಯದ ರೈತ ಸಮುದಾಯಕ್ಕೆ 13 ಸಾವಿರ ಕೋಟಿ ರೂ. ಸಾಲ ನೀಡಲಾಗಿತ್ತು. ಈ ವರ್ಷವೂ ರೈತರಿಗೆ ಹೊಸ ಸಾಲ ನೀಡಲಾಗುವುದು ಎಂದು ತಿಳಿಸಿದರು.
Comments
Post a Comment