ಕೊರೊನಾ ಶಂಕಿತರ ಅಂತ್ಯಕ್ರಿಯೆಗೆ ಸ್ಥಳೀಯರಿಂದ ಅಡ್ಡಿ: ಕಲ್ಲು ತೂರಾಟ

     



ಅಂಬಾಲಾ, ಏಪ್ರಿಲ್ 28: ಕೊರೊನಾ ಶಂಕಿತನ ಅಂತ್ಯಕ್ರಿಯೆಗೆ ಸ್ಥಳೀಯರು ಅಡ್ಡಿ ಪಡಿಸಿದ್ದು, ವೈದ್ಯರು, ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಹರ್ಯಾಣಾದಲ್ಲಿ ನಡೆದಿದೆ.

ಯಾವುದೇ ಕಾರಣಕ್ಕೂ ವ್ಯಕ್ತಿಯ ಅಂತ್ಯಕ್ರಿಯೆ ಮಾಡಲು ಇಲ್ಲಿ ಅವಕಾಶ ಮಾಡಿಕೊಡುವುದಿಲ್ಲ ಎಂದು ಪ್ರತಿಭಟನೆ ಮಾಡಿದ ಸಾರ್ವಜನಿಕರು ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದರು.

ಕೊರೊನಾ ಸೋಂಕಿನ ಆರಂಭಿಕ ಹೊಸ ಲಕ್ಷಣಗಳನ್ನು ಪತ್ತೆ ಹಚ್ಚಿದ ಅಮೆರಿಕ

60 ವರ್ಷದ ಮಹಿಳೆ ಸಿಟಿ ಸಿವಿಲ್ ಆಸ್ಪತ್ರೆಯಲ್ಲಿ ಸೋಮವಾರ ಕೊನೆಯುಸಿರಳೆದಿದ್ದರು. ಕೊನೆಗೆ ಜನರನ್ನು ಚದುರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದರು. ಮಹಿಳೆಗೆ ಸೋಮವಾರ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಆಕೆ ಚಿಕಿತ್ಸೆ ಪಡೆಯುತ್ತಿರುವಾಗಲೇ ಮೃತಪಟ್ಟಿದ್ದಳು. ಆಕೆಯ ರಕ್ತದ ಮಾದರಿಯನ್ನು ಪಡೆದುಕೊಳ್ಳಲಾಗಿದೆ.

ಕೊರೊನಾ ಶಂಕಿತರು ಅಥವಾ ಕೊರೊನಾ ಸೋಂಕಿತರ ಅಂತ್ಯಕ್ರಿಯೆಯನ್ನು ಒಂದೇ ರೀತಿ ಮಾಡಲಾಗುತ್ತದೆ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ. ಅದನ್ನು ನೋಡಿ ಇವರು ಕೊರೊನಾದಿಂದ ಮೃತಪಟ್ಟಿದ್ದಾರೆ ಎಂದುಕೊಳ್ಳುವುದು ತಪ್ಪು ಎಂದು ವೈದ್ಯರು ತಿಳಿಸಿದ್ದಾರೆ.

ಆಂಬ್ಯುಲೆನ್ಸ್ ಮೇಲೂ ಕಲ್ಲು ತೂರಾಟ ನಡೆಸಿ ಜಖಂ ಮಾಡಿದ್ದರು. ಲಾಕ್‌ಡೌನ್ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸಿ ಕಲ್ಲು ತೂರಾಟ ಮಾಡಿದ ಜನರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಎಸ್‌ಪಿ ಕುಮಾರ್ ಹೇಳಿದ್ದಾರೆ.

ಅಂಬಾಲಾದಲ್ಲಿ ಇದುವರೆಗೆ 12 ಕೊರೊನಾ ಪ್ರಕರಣಗಳು ದೃಢಪಟ್ಟಿದೆ. ಹರ್ಯಾಣಾದಲ್ಲಿ 289 ಪ್ರಕರಣಗಳಿದ್ದು ಮೂವರು ಮೃತಪಟ್ಟಿದ್ದಾರೆ.

Comments