ಇದೀಗ ಬಂದ ಸುದ್ದಿ: ಮಾರಕ ಕೊರೊನಾಗೆ ಬಲಿಯಾದ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ.? ಕೊರೊನಾಗೆ ಬಲಿಯಾದ ಭಾರತದ ಮೊದಲ ರಾಜಕಾರಣಿ ಇವರು.?
ಭಾರತದಲ್ಲಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕೊರೊನಾ ವೈರಸ್ ನಿಂದ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಸಾವನ್ನಪ್ಪಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ವೈರಸ್ ಗೆ ಮೊದಲ ರಾಜಕಾರಣಿ ಬಲಿಯಾಗಿದ್ದಾರೆ.
ಗುಜರಾತ್ ನ ಕಾಂಗ್ರೆಸ್ ನಾಯಕ ಬದ್ರುದ್ದೀನ್ ಶೇಖ್ ಕೊರೊನಾ ವೈರಸ್ ನಿಂದಾಗಿ ಮೃತಪಟ್ಟಿದ್ದಾರೆ. ಬಡವರಿಗೆ ಆಹಾರ ವಿತರಿಸಲು ಹೋಗಿದ್ದ ಬದ್ರುದ್ದೀನ್ ಶೇಖ್ ಅವರಲ್ಲಿ ಕೊರೊನಾ ವೈರಸ್ ಲಕ್ಷಣಗಳು ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ಗುಜರಾತ್ ನ ಅಹಮದಾಬಾದ್ ನಲ್ಲಿರುವ ಎಸ್ ವಿಪಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. 8 ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಅವರು ನಿನ್ನೆ ರಾತ್ರಿ ಸಾವನ್ನಪ್ಪಿದ್ದಾರೆ.
ಬದ್ರುದ್ದೀನ್ ಶೇಕ್ ಸಾವಿನ ಕುರಿತು ಕಾಂಗ್ರೆಸ್ ನಾಯಕ ಶಕ್ತಿ ಸಿನ್ಹಾ ಗೋಹಿಲ್ ಖಚಿತಪಡಿಸಿದ್ದು, ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ನನ್ನ ಪ್ರೀತಿಯ ಸ್ನೇಹಿತ ಬದ್ರುದ್ದೀನ್ ಅಹಮದಾಬಾದ್ನಲ್ಲಿ ಬಡವರಿಗೆ ಆಹಾರ ವಿತರಿಸುವಾಗ ಕೊರೋನಾ ಸೋಂಕಿಗೆ ತುತ್ತಾಗಿದ್ದ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
My friend #Badru was a true #CoronaWarrior . He got infected with #coronavirus whilst helping poor people in #Ahmedabad #Gujarat .He is a big loss to our @INCGujarat family as he succumbed to #Covid_19 . Lesson for all: Please take care and co operate with your local authorities.
Comments
Post a Comment