21 ದಿನಗಳ ಕಾಲ ಲಾಕ್ಡೌನ್ಗೆ ಕರೆ ನೀಡಿದ್ದರೂ ಬೆಂಗಳೂರಿನ ಮಾರುಕಟ್ಟೆಗಳಲ್ಲಿ ಜನಜಂಗುಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೊಸ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.
ಜ್ಯೋತಿಷ್ಯಿಗಳನ್ನು ಸುಲಭವಾಗಿ ಸಂಪರ್ಕಿಸಲು ಕೆಳಗಿನ Call Now ಬಟನ್ ಕ್ಲಿಕ್ ಮಾಡಿ
ತರಕಾರಿ, ಹಣ್ಣುಗಳನ್ನು ಕೊಳ್ಳಲು ಕೆ.ಆರ್. ಮಾರುಕಟ್ಟೆಗೆ ಜನರು ಮುಗಿಬೀಳುತ್ತಿದ್ದಾರೆ. ಹೀಗಾಗಿ, ಮಾರ್ಕೆಟ್, ಕಲಾಸಿಪಾಳ್ಯದಲ್ಲಿ ಜನಸಂದಣಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಕಲಾಸಿಪಾಳ್ಯ ಮತ್ತು ಕೆ.ಆರ್. ಮಾರ್ಕೆಟ್ನಲ್ಲಿ ಪರಿಶೀಲನೆ ಮಾಡುತ್ತಿದ್ದೇವೆ. ಇಲ್ಲಿ ಬಂದು ಪರಿಶೀಲನೆ ನಡೆಸಿದಾಗ ಬೆಳಗ್ಗೆಯಿಂದ ಹೆಚ್ಚು ಜನ ಬರುತ್ತಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ತರಕಾರಿಗೆ ಚಂದ್ರಾ ಲೇಔಟ್, ವಿಜಯನಗರ, ಬಸವನಗುಡಿ ಕಡೆಯಿಂದ ಜನರು ಬರುತ್ತಿದ್ದಾರೆ. ಪ್ರಧಾನಿ ಮೋದಿ ಲಾಕ್ಡೌನ್ಗೆ ಆದೇಶಿಸಿದ್ದರೂ ಜನರು ಕೇಳುತ್ತಿಲ್ಲ. ಈಗ ಪರಿಶೀಲಿಸಿದಾಗ ಪರಿಸ್ಥಿತಿ ಗೊತ್ತಾಯ್ತು. ಇವತ್ತೇ ಸಚಿವ ಆರ್. ಅಶೋಕ್ ಮತ್ತು ಬಿಬಿಎಂಪಿ ಅಧಿಕಾರಿಗಳ ಜೊತೆ
ಕೆ.ಆರ್. ಮಾರ್ಕೆಟ್ನಲ್ಲಿರುವ ಅಂಗಡಿಗಳನ್ನು ಬಸವನಗುಡಿಯ ನ್ಯಾಷನಲ್ ಮೈದಾನ ಮತ್ತು ವಿಜಯನಗರದ ಮೈದಾನಕ್ಕೆ ಶಿಫ್ಟ್ ಮಾಡುವ ಬಗ್ಗೆ ಮಾತುಕತೆ ನಡೆಸಲಾಗುವುದು. ಅಲ್ಲಿ ತರಕಾರಿ ಮಾರಾಟಕ್ಕೆ ಅನುವು ಮಾಡಿ, ಅಂತರ ಕಾಯ್ದುಕೊಳ್ಳಲು ಸೂಚನೆ ಕೊಡಲಾಗುತ್ತದೆ. ಇದಕ್ಕೆ ಎರಡು ದಿನ ಸಮಯ ಬೇಕಾಗುತ್ತದೆ. ನಾಳೆಯೇ ಶಿಪ್ಟ್ ಮಾಡುವ ಬಗ್ಗೆ ಮೇಯರ್ ಜೊತೆ ಚರ್ಚೆ ಮಾಡುತ್ತೇವೆ ಎಂದಿದ್ದಾರೆ.
ಜ್ಯೋತಿಷ್ಯಿಗಳನ್ನು ಸುಲಭವಾಗಿ ಸಂಪರ್ಕಿಸಲು ಕೆಳಗಿನ Call Now ಬಟನ್ ಕ್ಲಿಕ್ ಮಾಡಿ
ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಪ್ರಾಯೋಗಿಕವಾಗಿ ಸಹಾಯವಾಣಿ ತೆರೆಯಲಾಗಿದ್ದು, ತುರ್ತು ಸಂದರ್ಭದಲ್ಲಿ ಔಷಧಿ ತಲುಪಿಸುತ್ತೇವೆ. ಪುಂಡರು ಉಡಾಫೆ ಮಾಡಿಕೊಂಡು ರಸ್ತೆಯಲ್ಲಿ ಓಡಾಡುವುದು ಸರಿಯಲ್ಲ. ಇನ್ನೂ ಭಾರತದಲ್ಲಿ ಕೊರೋನಾ ಸೋಂಕು 3ನೇ ಹಂತ ತಲುಪಿಲ್ಲ. ಈಗಲೇ ಜನರು ಎಚ್ಚೆತ್ತುಕೊಂಡರೆ ಒಳ್ಳೆಯದು ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.
Comments
Post a Comment