ಲಾಕ್ಡೌನ್ನಿಂದ ದೇಶದ ವಿವಿಧೆಡೆ ಸಿಲುಕಿರುವ ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ತಲುಪಿಸುವ ಸಲುವಾಗಿ ಕೇಂದ್ರ ಸರ್ಕಾರ ಶ್ರಮಿಕ್ ವಿಶೇಷ ರೈಲು ವ್ಯವಸ್ಥೆ ಮಾಡಿದೆ.
ವಿವಿಧ ರಾಜ್ಯಗಳಿಗೆ ಶ್ರಮಿಕ್ ರೈಲು ಸಂಚಾರ ಮಾಡುತ್ತಿದ್ದು, ಆಯಾ ರಾಜ್ಯಗಳ ಕಾರ್ಮಿಕರು ಅದರಲ್ಲಿ ತಮ್ಮ ಊರಿಗೆ ತೆರಳುತ್ತಿದ್ದಾರೆ.
ಜ್ಯೋತಿಷ್ಯಿಗಳನ್ನು ಸುಲಭವಾಗಿ ಸಂಪರ್ಕಿಸಲು ಕೆಳಗಿನ Call Now ಬಟನ್ ಕ್ಲಿಕ್ ಮಾಡಿ
ಆದರೆ ಇದಕ್ಕೂ ಸಹ ಪಶ್ಚಿಮ ಬಂಗಾಳ ಸರ್ಕಾರ ಸಹಕಾರ ನೀಡುತ್ತಿಲ್ಲ. ಈ ಹಿಂದೆ ಕೊವಿಡ್-19 ಪರಿಸ್ಥಿತಿ ಪರಿಶೀಲನೆಗೆ ಬಂದಿದ್ದ ಕೇಂದ್ರ ತಜ್ಞರ ತಂಡ ರಾಜ್ಯ ಪ್ರವೇಶಿಸಲು ಅಡ್ಡಿ ಮಾಡಿದ್ದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಈ ಕಾರ್ಮಿಕರ ರೈಲು ಪ್ರವೇಶಿಸುವುದಕ್ಕೂ ಅಡ್ಡಿ ಮಾಡುತ್ತಿದ್ದಾರೆ. ಇದರಿಂದಾಗಿ ತೀವ್ರ ಅಸಮಾಧಾನಗೊಂಡಿರುವ ಗೃಹ ಸಚಿವ ಅಮಿತ್ ಷಾ ಮಮತಾ ಬ್ಯಾನರ್ಜಿ ಅವರಿಗೆ ಪತ್ರ ಬರೆದಿದ್ದಾರೆ.
ಬೇರೆ ರಾಜ್ಯಗಳಿಗೆ ವಲಸೆ ತೆರಳಿದ್ದ ಕಾರ್ಮಿಕರು ರೈಲಿನಲ್ಲಿ ಪಶ್ಚಿಮ ಬಂಗಾಳಕ್ಕೆ ತೆರಳಿದ್ದು, ತಮ್ಮ ಊರುಗಳಿಗೆ ಹೋಗಲು ಉತ್ಸುಕರಾಗಿದ್ದಾರೆ. ಆದರೆ ರಾಜ್ಯ ಸರ್ಕಾರ ಆ ರೈಲುಗಳ ಪ್ರವೇಶಕ್ಕೆ ಅಡ್ಡಿ ಮಾಡುತ್ತಿದೆ. ಕೇಂದ್ರ ಸರ್ಕಾರ ವಲಸೆ ಕಾರ್ಮಿಕರನ್ನು ಅವರ ಮನೆಗಳಿಗೆ ತಲುಪಿಸುವ ಕೆಲಸ ಮಾಡುತ್ತಿದ್ದರೂ, ಪಶ್ಚಿಮ ಬಂಗಾಳದಿಂದ ನಿರೀಕ್ಷಿತ ಬೆಂಬಲ ಸಿಗುತ್ತಿಲ್ಲ ಎಂದು ಅಮಿತ್ ಷಾ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇದರಿಂದಾಗಿ ವಲಸೆ ಕಾರ್ಮಿಕರಿಗೆ ಅನ್ಯಾಯವಾಗುತ್ತಿದೆ. ಮತ್ತಷ್ಟು ಕಷ್ಟಗಳಿಗೆ ಕಾರಣವಾಗುತ್ತಿದೆ ಎಂದಿದ್ದಾರೆ.
ಜ್ಯೋತಿಷ್ಯಿಗಳನ್ನು ಸುಲಭವಾಗಿ ಸಂಪರ್ಕಿಸಲು ಕೆಳಗಿನ Call Now ಬಟನ್ ಕ್ಲಿಕ್ ಮಾಡಿ
ಅಷ್ಟೇ ಅಲ್ಲ, ಪಶ್ಚಿಮ ಬಂಗಾಳದಲ್ಲಿ ಲಾಕ್ಡೌನ್ ನಿಯಮಗಳು ಉಲ್ಲಂಘನೆಯಾಗುತ್ತಿರುವ ಬಗ್ಗೆಯೂ ಅಮಿತ್ ಷಾ ಪತ್ರದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆಟೋ ರಿಕ್ಷಾಗಳು ಸಂಚರಿಸುತ್ತಿವೆ. ಮಕ್ಕಳು ಕ್ರಿಕೆಟ್ ಆಡುತ್ತಿದ್ದಾರೆ. ಜನರು ನದಿಯಲ್ಲಿ ಸ್ನಾನ ಮಾಡುತ್ತಿದ್ದಾರೆ. ಈ ಮೂಲಕ ನಿಮ್ಮ ರಾಜ್ಯದಲ್ಲಿ ಲಾಕ್ಡೌನ್ ನಿಯಮಗಳನ್ನು ಸಂಪೂರ್ಣ ಉಲ್ಲಂಘಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಕೋಲ್ಕತ್ತ, ಹೌರಾಹ್ನಂತರ ಕೆಲವು ಕೊವಿಡ್-19 ಕಂಟೇನ್ಮೆಂಟ್ ವಲಯಗಳಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಪರಿಣಾಮಕಾರಿಯಾಗಿ ಜರುಗಿಸುತ್ತಿಲ್ಲ. ಪೊಲೀಸ್, ವೈದ್ಯಕೀಯ ಸಿಬ್ಬಂದಿಯ ಮೇಲೆ ಹಲ್ಲೆ ಮುಂದುವರಿದಿದೆ ಎಂದು ಕೇಂದ್ರ ಸರ್ಕಾರ ಬುಧವಾರ ತರಾಟೆಗೆ ತೆಗೆದುಕೊಂಡಿತ್ತು. (ಏಜೆನ್ಸೀಸ್)
Comments
Post a Comment