ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಏಕಾಏಕಿ ಬಿಜೆಪಿಯ ಯುವ ನಾಯಕ ಬಿ.ವೈ ವಿಜಯೇಂದ್ರ ಅವರ ವಿರುದ್ಧ ಸಿಡಿದೆದ್ದಿದ್ದು, ಇದಕ್ಕೆ ಕಾರಣ ಸಿದ್ದರಾಮಯ್ಯ ಅವರು ಪ್ರಭಾವ ಹೊಂದಿರತಕ್ಕ ಕ್ಷೇತ್ರಗಳಾದ ವರುಣಾ ಸೇರಿದಂತೆ ಹಳೆ ಮೈಸೂರು ಭಾಗಗಳಲ್ಲಿ ಹೆಚ್ಚುತ್ತಿರುವ ವಿಜಯೇಂದ್ರ ಅವರ ಜನಪ್ರಿಯತೆ ಎಂದು ತಿಳಿದು ಬಂದಿದೆ.
ಆ ಕ್ಷೇತ್ರದ ಸಿದ್ದರಾಮಯ್ಯ ಅವರ ಆಪ್ತರು ಹಳೆಮೈಸೂರು ಭಾಗದಲ್ಲಿ ವಿಜಯೇಂದ್ರ ಅವರು ತಮ್ಮ ಕೆಲಸಗಳ ಮೂಲಕ ಜನಪ್ರಿಯತೆ ಗಳಿಸುತ್ತಿದ್ದಾರೆ ಎಂದು ಗುಪ್ತ ರಿಪೋರ್ಟ್ ಅನ್ನು ನೀಡಿದ್ದಾರೆ ಎನ್ನುವ ವಿಚಾರ ಬಯಲಾಗಿದೆ. ಇದರಿಂದ ಕಂಗೆಟ್ಟ ಸಿದ್ದರಾಮಯ್ಯ ಅವರು ಇಂದು ಪತ್ರಿಕಾಗೋಷ್ಠಿ ನಡೆಸಿ ವಿಜಯೇಂದ್ರ ಅವರ ವಿರುದ್ಧ ಆರೋಪ ಮಾಡಿದ್ದಾರೆ ಎನ್ನುವ ವಿಚಾರ ಅವರ ಆಪ್ತ ವಲಯದಿಂದಲೇ ಕೇಳಿ ಬರುತ್ತಿದೆ.
ಇಂದು ಕೊಪ್ಪಳದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು "ರಾಜ್ಯದಲ್ಲಿ ಇಬ್ಬರು ಮುಖ್ಯಮಂತ್ರಿಗಳಿದ್ದು, ಸಂವಿಧಾನಿಕ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಅಸಂವಿಧಾನಿಕ ಮುಖ್ಯಮಂತ್ರಿ ವಿಜಯೇಂದ್ರ. ಹೀಗಾಗಿ ಬಿಜೆಪಿಯಲ್ಲಿ ಭುಗಿಲೆದ್ದಿದೆ" ಎಂದು ಆರೋಪ ಮಾಡಿದ್ದರು
Comments
Post a Comment