ರಾಜ್ಯದಲ್ಲಿ ರಾಜಕೀಯ ವಿದ್ಯಮಾನಗಳು ನಡೆಯುತ್ತಿರುವ ಬೆನ್ನಲ್ಲೇ ಅತ್ತ ಪಕ್ಕದ ಮುಂಬೈ ಕಾಂಗ್ರೆಸ್ ಅಧ್ಯಕ್ಷ ಮಿಲಿಂದ್ ಡಿಯೋರಾ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.ರಾಜೀನಾಮೆ ಬಳಿಕ ಮಾತನಾಡಿದ ಅವರು ರಾಷ್ಟ್ರಮಟ್ಟದಲ್ಲಿ ಪಕ್ಷವನ್ನು ಬಲಪಡಿಸಲು ತಾವು ಕೆಲಸ ಮಾಡುವುದಾಗಿ ಹೇಳಿದ್ದಾರೆ. ಈ ವರ್ಷಾಂತದಲ್ಲಿ ಮಹಾರಾಷ್ಟ್ರ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು ಅಲ್ಲಿಯವರೆಗೆ ಮುಂಬೈ ನಗರದ ಪಕ್ಷದ ಘಟಕದ ಮೇಲ್ವಿಚಾರಣೆಗೆ ಮೂರು ಹಿರಿಯ ಕಾಂಗ್ರೆಸ್ ಮುಖಂಡರನ್ನು ಒಳಗೊಂಡ ತಾತ್ಕಾಲಿಕ ನಾಯಕತ್ವವನ್ನು ಸ್ಥಾಪಿಸಲು ಅವರು ಶಿಫಾರಸು ಮಾಡಿದರು.
Comments
Post a Comment